Friday, June 27, 2025
Homeಕರಾವಳಿಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು !

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು !

spot_img
- Advertisement -
- Advertisement -

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ 55 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಡಿಸೆಂಬರ್ 28 ರಂದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

ಮೃತರನ್ನು ದೇರಳಕಟ್ಟೆಯ ಬದ್ಯಾರ್ ನಿವಾಸಿ ಇಸ್ಮಾಯಿಲ್ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಇಬ್ರಾಹಿಂ ಅವರು ಡಿ.26ರಂದು ದೇರಳಕಟ್ಟೆಯಿಂದ ಕೆ.ಸಿ.ರಸ್ತೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿತ್ತು. ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!