Friday, June 5, 2026
Homeಕರಾವಳಿರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುವಾಗ ಭೀಕರ ಅಪಘಾತ : ಕಾರ್ಕಳದಲ್ಲಿ ಇಬ್ಬರು ಯುವಕರು...

ರಸ್ತೆಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯುವಾಗ ಭೀಕರ ಅಪಘಾತ : ಕಾರ್ಕಳದಲ್ಲಿ ಇಬ್ಬರು ಯುವಕರು ಸಾವು

- Advertisement -
- Advertisement -

ಕಾರ್ಕಳ: ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಹೊಸ ವರ್ಷದ ಸಂದೇಶ ಬರೆಯುವಾಗ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಉಡುಪಿಯ ಕಾರ್ಕಳದ ಮೀಯಾರು ಕಾಜರ ಬೈಲಿ ಎಂಬಲ್ಲಿ ಇಬ್ಬರು ಯುವಕರು ಹ್ಯಾಪಿ ನ್ಯೂ ಇಯರ್ ಎಂದು ರಸ್ತೆಯಲ್ಲಿ ಬರೆಯಲು ಮುಂದಾಗಿದ್ದರು. ಈ ವೇಳೆ ವೇಗವಾಗಿ ಬಂದ ಈಕೋ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಮೃತಪಟ್ಟವರನ್ನು ಬಾಗಲಕೋಟೆಯವರಾದ ಶರಣ್ ಮತ್ತು ಸಿದ್ದು ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!