Thursday, June 25, 2026
Homeಕರಾವಳಿಬಂಟ್ವಾಳ: ಪಾದಾಚಾರಿಗೆ ಬೈಕ್ ಡಿಕ್ಕಿ; ಪಾದಾಚಾರಿ ಹಾಗೂ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಪಾದಾಚಾರಿಗೆ ಬೈಕ್ ಡಿಕ್ಕಿ; ಪಾದಾಚಾರಿ ಹಾಗೂ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ: ಪಾದಾಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಹಾಗೂ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಪಾದಾಚಾರಿ ಸ್ಥಳೀಯ ನಿವಾಸಿ ಅಬ್ದುಲ್ ಮಜೀದ್ ಹಾಗೂ ಬೈಕ್ ಸವಾರ ವಿರಾಜಪೇಟೆ ನಿವಾಸಿ ಸೋಮಣ್ಣ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮಣ್ಣ ಮಂಗಳೂರಿನ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅವರು ವಿರಾಜಪೇಟೆಯಿಂದ ಮಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

- Advertisement -

Latest News

error: Content is protected !!