- Advertisement -


- Advertisement -
ಕಾಪು: ವಿಧಾನಸಭಾ ಕ್ಷೇತ್ರದ 80 ಬಡಗುಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹3.30 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಶಾಸಕರ ಶಿಫಾರಸ್ಸಿನ ಮೇರೆಗೆ ₹2.55 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈಗಾಗಲೇ ₹75 ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
ಗ್ರಾಮೀಣ ಪ್ರದೇಶಗಳ ರಸ್ತೆ ಸಂಪರ್ಕವನ್ನು ಸುಧಾರಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
- Advertisement -


