Saturday, June 6, 2026
Homeತಾಜಾ ಸುದ್ದಿಬಂಟ್ವಾಳ: ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಬಿಜೆಪಿ ಬಹುಮತ ದೊಂದಿಗೆ ಅಧಿಕಾರಕ್ಕೆ ಬರುತ್ತದೆ: ಸಚಿವ ಕೆ.ಎಸ್.ಈಶ್ವರಪ್ಪ

ಬಂಟ್ವಾಳ: ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಬಿಜೆಪಿ ಬಹುಮತ ದೊಂದಿಗೆ ಅಧಿಕಾರಕ್ಕೆ ಬರುತ್ತದೆ: ಸಚಿವ ಕೆ.ಎಸ್.ಈಶ್ವರಪ್ಪ

- Advertisement -
- Advertisement -

ಬಂಟ್ವಾಳ: ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ರ್ಯ ಯೋಧರ ನಿಜವಾದ ಕನಸು ಮೋದಿ ಆಡಳಿತದಲ್ಲಿ ನನಸಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಬಂಟ್ವಾಳ ತಾಲೂಕಿನ ಸಜೀಪಮೂಡಗ್ರಾಮದ ಶ್ರೀಕ್ಷೇತ್ರ ಮಿತ್ತಮಜಲಿಗೆ 2.50 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆಯ ಲೋಕಾರ್ಪಣೆಯ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂಘಟನೆ, ಅಭಿವೃದ್ಧಿಯ ವಿಚಾರಧಾರೆಯ ಜೊತೆಗೆ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ , ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರು, ರಾಜ್ಯದ 224 ಕ್ಷೇತ್ರಗಳ ಬೂತ್ ಮಟ್ಟದಲ್ಲೂ ಸಂಚಲನ ತಂದಿದ್ದಾರೆ, ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಬಿಜೆಪಿ ಬಹುಮತ ದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದವರು ಭವಿಷ್ಯ ನುಡಿದರು.

ಇತ್ತೀಚೆಗಿನ ಚುನಾವಣೆಗಳಲ್ಲಿ ಬಿಜೆಪಿ ಪರವಾದ ಫಲಿತಾಂಶಗಳೇ ಬಂದಿದ್ದು, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಡಿಕೆಶಿ, ಸಿದ್ದರಾಮಯ್ಯ ಶಪಥ ಮಾಡಿದ್ದಾರೆ, ಅವರಿಬ್ಬರ ಇತ್ತೀಚೆಗಿನ ನಡವಳಿಕೆಗಳು, ಹೇಳಿಕೆಗಳು ಇದನ್ನು‌ಸ್ಪಷ್ಟ ಪಡಿಸಿದೆ ಎಂದು ಅವರು ವ್ಯಂಗ್ಯವಾಡಿದರು.

- Advertisement -

Latest News

error: Content is protected !!