- Advertisement -
- Advertisement -
ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಯಲಿದೆ.
ಮಂಗಳೂರು ನಗರದ ಪಿವಿಎಸ್ ವೃತ್ತದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಠಿ ಮೂಲಕ ಪ್ರತಿಭಟನೆಯ ಮಾಹಿತಿ ನೀಡಿದ್ದಾರೆ.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ರಸ್ತೆ ತಡೆಯಲ್ಲಿ ಭಾಗವಹಿಸಲಿದ್ದಾರೆ.
ಏರಿಕೆ ಮಾಡಿರುವ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕೂಡಲೇ ಇಳಿಕೆ ಮಾಡುವಂತೆ ಒತ್ತಾಯಿಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ವಿಪಕ್ಷ ಬಿಜೆಪಿ ವತಿಯಿಂದ ಇಂದು ರಸ್ತೆ ತಡೆ ಆಯೋಜಿಸಲಾಗಿದೆ.
- Advertisement -