ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಹಿನ್ನೆಲೆಯಲ್ಲಿ ನಾಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ತಡೆ ನಡೆಯಲಿದೆ.
ಬೆಲೆ ಏರಿಕೆಯನ್ನು ವಿರೋಧಿಸಿ ರಸ್ತೆ ತಡೆ ನಡೆಸಲಾಗುವುದು ಎಂದು ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ಮಂಗಳೂರಿನಲ್ಲಿ ಇಂದು ತಿಳಿಸಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಡಾ. ಭರತ್ ವೈ ಶೆಟ್ಟಿ, ಸಿದ್ದರಾಮಯ್ಯ ಸ್ವಯಂ ಘೋಷಿತ ಆರ್ಥಿಕ ತಜ್ಞ ಎಂದು ಹೇಳಿಕೊಳ್ಳುತ್ತಾರೆ, ಹಿಂದೆ ಪೆಟ್ರೋಲ್ ಗೆ ಸೆಸ್ ಜಾಸ್ತಿ ಮಾಡಿದ್ದಾಗ ಇದೇ ಸಿದ್ದರಾಮಯ್ಯ ಭಾಷಣ ಮಾಡಿದ್ದು ನೆನಪಿದೆ ಎಂದು ಹೇಳಿದ್ದಾರೆ.
ರಸ್ತೆ ತಡೆಗೆ ರಾಜ್ಯ ಸರ್ಕಾರ ಬಗ್ಗದಿದ್ದರೆ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿರುವ ಶಾಸಕ ಭರತ್ ಶೆಟ್ಟಿ,
ಸರ್ಕಾರದ ಖಜಾನೆ ಖಾಲಿಯಾಗಿದ್ದು, ಇಲಾಖೆಗಳಲ್ಲಿ ವೇತನ ಕೊಡಲು ದುಡ್ಡಿಲ್ಲ ಎಂದು ಟೀಕಿಸಿದ್ದಾರೆ.ಬೆಲೆ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ವಿಪಕ್ಷ ಬಿಜೆಪಿ ಮುಂದಾಗಿದೆ.