Saturday, April 27, 2024
Homeತಾಜಾ ಸುದ್ದಿಸುಳ್ಯ: ಪತ್ರಕರ್ತರು ಗ್ರಾಮವಾಸ್ತವ್ಯ ಮಾಡಿದ ಊರಿಗೆ ರಸ್ತೆ ಭಾಗ್ಯ

ಸುಳ್ಯ: ಪತ್ರಕರ್ತರು ಗ್ರಾಮವಾಸ್ತವ್ಯ ಮಾಡಿದ ಊರಿಗೆ ರಸ್ತೆ ಭಾಗ್ಯ

spot_img
- Advertisement -
- Advertisement -

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮಕ್ಕೀಗ ಅಭಿವೃದ್ಧಿ ಶಕೆ. ಎರಡು ವರ್ಷಗಳ ಹಿಂದೆ ಪತ್ರಕರ್ತರು ಗ್ರಾಮವಾಸ್ಯವ್ಯ ಮಾಡಿದ ಊರಿಗೆ 1.35 ಕೋಟಿ ಅನುದಾನದಲ್ಲಿ ರಸ್ತೆ ನಿರ್ಮಾಣಗೊಂಡು ಉದ್ಘಾಟನೆಯಾಗಿದೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2020 ಜನವರಿ 5 ರಂದು ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿತ್ತು. ಸಚಿವರು, ಸಂಸದರು, ಶಾಸಕರು ಸೇರಿ ಜನಪ್ರತಿನಿಧಿಗಳು ಹಾಗು ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳು ಭಾಗವಹಿಸಿದ ಗ್ರಾಮ ವಾಸ್ತವ್ಯದಲ್ಲಿ ನೂರಾರು ಮಂದಿ ಗ್ರಾಮದ ಪ್ರಮುಖ ಬೇಡಿಕೆಗಳನ್ನು ಮಂಡಿಸಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಸಚಿವ ಎಸ್.ಅಂಗಾರ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಲವು ಅಭಿವೃದ್ಧಿಗೆ ಅನುದಾನ ಒದಗಿಸಿದ್ದಾರೆ.

ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ  ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ 1.5 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಇದೀಗ ರಸ್ತೆ ಕಾಮಗಾರಿ ಪೂರ್ತಿಯಾಗಿ ಉದ್ಘಾಟನೆಗೊಂಡಿದೆ. ಸಚಿವ ಎಸ್. ಅಂಗಾರ ಅವರು ಕಳೆದ ಎರಡು ವರ್ಷದಲ್ಲಿ ಹಲವು ಅಭಿವೃದ್ಧಿಗೆ ಅನುದಾನ ಒದಗಿಸಿದ್ದಾರೆ. ಗ್ರಾಮದ ಪ್ರಮುಖ ಬೇಡಿಕೆಯಾದ ಮಡಪ್ಪಾಡಿ- ಹಾಡಿಕಲ್ಲು ರಸ್ತೆಗೆ 80 ಲಕ್ಷ ಅನುದಾನ ಒದಗಿಸಿದ್ದಾರೆ. ಇನ್ನೊಂದು ಬೇಡಿಕೆ  ಎಳುವೆ ಸೇತುವೆ ಒಂದು ಕೋಟಿ ಅನುದಾನ ನೀಡಿ ಕಾಮಗಾರಿ ಪೂರ್ತಿಯಾಗಿದೆ. ಪತ್ರಕರ್ತರು, ಜನರು ಮುಂದಿರಿಸಿದ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಆದ್ಯತೆಯ ಮೇರೆಗೆ ಪ್ರಯತ್ನ ನಡೆಸುವುದಾಗಿ ಸಚಿವ ಅಂಗಾರ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ  ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಕಳೆದ ಎರಡು ವರ್ಷದಲ್ಲಿ ಗ್ರಾಮದಲ್ಲಿ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆತಿದೆ.

- Advertisement -
spot_img

Latest News

error: Content is protected !!