Friday, May 17, 2024
Homeಕರಾವಳಿಬಿ.ಸಿರೋಡ್ - ಕೊಟ್ಟಿಗೆಹಾರ ಹೆದ್ದಾರಿ ಕಾಮಗಾರಿ: ವಾಹನ ಸಂಚಾರದಲ್ಲಿ ಬದಲಾವಣೆ

ಬಿ.ಸಿರೋಡ್ – ಕೊಟ್ಟಿಗೆಹಾರ ಹೆದ್ದಾರಿ ಕಾಮಗಾರಿ: ವಾಹನ ಸಂಚಾರದಲ್ಲಿ ಬದಲಾವಣೆ

spot_img
- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73 ಬಿ.ಸಿರೋಡ್ – ಕೊಟ್ಟಿಗೆಹಾರ ಭಾಗದ 20.150 ಕಿ.ಮೀ ರಿಂದ 40 ಕಿಮೀ ರವರೆಗೆ ಬಿ.ಸಿರೋಡಿನಿಂದ ಕೊಟ್ಟಿಗೆಹಾರ ಇಪಿಸಿ ಮಾದರಿಯಲ್ಲಿ ಮಧ್ಯಮ ಪಥ ರಸ್ತೆಯಿಂದ ಪೇವ್ಡ್ ಶೋಲ್ಡರ್‍ನೊಂದಿಗೆ ದ್ವಿಪಥ ರಸ್ತೆ ಹಾಗೂ ಚತುಷ್ಪಥ ರಸ್ತೆಯನ್ನಾಗಿ ಅಗಲಪಡಿಸುವ ಕಾಂಕ್ರೀಟ್ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಬಂಟ್ವಾಳ ತಾಲೂಕು ಬಿ.ಸಿ.ರೋಡ್‍ನಿಂದ ಜಕ್ರಿಬೆಟ್ಟುವರೆಗೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಪೂರ್ಣಗೊಳಿಸುವವರೆಗೆ ವಾಹನ ಸಂಚಾರವನ್ನು ಜುಲೈ 18 ರವೆರೆಗೆ ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಸಿಂಧೂ ಬಿ ರೂಪೇಶ್ ಆದೇಶಿಸಿದ್ದಾರೆ.

ಪರ್ಯಾಯ ಮಾರ್ಗಗಳು:

ಕಾರುಗಳು, ಜೀಪುಗಳು, ಟೆಂಪೋ, ವ್ಯಾನ್ ಎಲ್‍ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ಹಾಗೂ ಆಂಬುಲೆನ್ಸ್ ಮತ್ತು ದಿನನಿತ್ಯ ಸಂಚರಿಸಬಹುದಾದ ಸಾರ್ವಜನಿಕ ಬಸ್‌ಗಳು ಮಂಗಳೂರಿನಿಂದ ಪುಂಜಾಲಕಟ್ಟೆಯ ಕಡೆಗೆ ಮಂಗಳೂರು-ಬಿ.ಸಿ.ರೋಡ್-ಬಂಟ್ವಾಳಪೇಟೆ-ಜಕ್ರಿಬೆಟ್ಟು ಮಾರ್ಗವಾಗಿ ಹಾಗೂ ಪುಂಜಾಲಕಟ್ಟೆಯಿಂದ ಮಂಗಳೂರು ಕಡೆಗೆ ಜಕ್ರಿಬೆಟ್ಟು-ಬಂಟ್ವಾಳ ಪೇಟೆ-ಬಿ.ಸಿ.ರೋಡ್-ಮಂಗಳೂರು ಮಾರ್ಗ ಸಂಚರಿಸಬಹುದು. ಮೂಡುಬಿದಿರೆ ಬಂಟ್ವಾಳ- ಬಿ.ಸಿ.ರೋಡ್ ಕಡೆಗೆ ಮೂಡುಬಿದಿರೆ-ಬಂಟ್ವಾಳ ಜಂಕ್ಷನ್- ರಾಷ್ಟ್ರೀಯ ಹೆದ್ದಾರಿ 234ರ ಮುಖಾಂತರ ಜಕ್ರಿಬೆಟ್ಟು-ಬಂಟ್ವಾಳ ಪೇಟೆ-ಬಿ.ಸಿ.ರೋಡ್ ಮಾರ್ಗವಾಗಿ ಸಂಚರಿಸಬಹುದು.

ಘನ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ಸಂಪೂರ್ಣ ನಿಷೇಧಿಸಲಾಗಿದೆ.

ಟ್ಯಾಂಕರ್‌ಗಳು, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚೇಸಿಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಯಕ್ಸೆಲ್ ಟ್ರಕ್ ಟ್ರೈಲರ್ಸ್, ರಾಜಹಂಸ ಬಸ್‌ಗಳು ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಾಣೆ ವಾಹನಗಳು ಮಂಗಳೂರಿನಿಂದ ಗುರುವಾಯನಕೆರೆ ಕಡೆಗೆ ಮಂಗಳೂರು-ಬಿ.ಸಿ.ರೋಡ್-ಮಾಣಿ-ಉಪ್ಪಿನಂಗಡಿ (ರಾಜ್ಯ ಹೆದ್ದಾರಿ 118) ಮುಖಾಂತರ ಕರಾಯ-ಕಲ್ಲೇರಿ-ಗುರುವಾಯನಕೆರೆ ಹಾಗೂ ಗುರುವಾಯನಕೆರೆಯಿಂದ ಮಂಗಳೂರಿನ ಕಡೆಗೆ ಗುರುವಾಯನಕೆರೆ (ರಾಜ್ಯ ಹೆದ್ದಾರಿ 118) ಮುಖಾಂತರ ಕಲ್ಲೇರಿ-ಕರಾಯ-ಉಪ್ಪಿನಂಗಡಿ-ಮಾಣಿ-ಬಿ.ಸಿ.ರೋಡ್-ಮಂಗಳೂರು ಮಾರ್ಗವಾಗಿ ಸಂಚರಿಸಬಹುದು.

- Advertisement -
spot_img

Latest News

error: Content is protected !!