Sunday, June 28, 2026
Homeಕರಾವಳಿಉಡುಪಿಉಡುಪಿ: ವಿದ್ಯಾರ್ಥಿಗಳನ್ನು  ಕಾರಿನಲ್ಲಿ‌ ಬಂದು ಅಪಹರಿಸಿ‌ ದರೋಡೆ: ನಾಲ್ವರು ಆರೋಪಿಗಳ ಬಂಧನ

ಉಡುಪಿ: ವಿದ್ಯಾರ್ಥಿಗಳನ್ನು  ಕಾರಿನಲ್ಲಿ‌ ಬಂದು ಅಪಹರಿಸಿ‌ ದರೋಡೆ: ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಉಡುಪಿ: ಕ್ಯಾಟರಿಂಗ್ ಕೆಲ್ಸ ಮುಗಿಸಿ ನಡೆದುಕೊಂಡು‌‌  ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಿಸಿ ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಣಿಪಾಲದ ಉಡುಪಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ವಿದ್ಯಾರ್ಥಿಗಳಾದ ಬ್ರೈಟಿಲ್ ಬಿಜು ಮತ್ತು ಮಹಮ್ಮದ್ ಸಿನಾನ್‌ ಕರಾವಳಿ ಬೈಪಾಸ್ ಬಳಿಯಿರುವ ಖಾಸಗಿ ಹೋಟೆಲಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಲ್ಸಂಕ ಜಂಕ್ಷನ್ ಬಳಿ ಕರಾವಳಿ ಬೈಪಾಸ್ ಕಡೆಯಿಂದ ಬಂದ KA -01-MA-5287 ನೋಂದಣಿ ಸಂಖ್ಯೆಯ ಕಾರನ್ನು ಕೈ ತೋರಿಸಿ ಡ್ರಾಪ್ ಕೇಳಿದ್ದಾರೆ.

ಕಾರನ್ನು ನಿಲ್ಲಿಸಿದ್ದು, ಚಾಲಕನು ಸೇರಿ ಕಾರಿನಲ್ಲಿ ನಾಲ್ವರಿದ್ದರು. ಕಾರಿನೊಳಗಿಂದ ಬಂದ ವಾಸನೆಯನ್ನು ಗಮನಿಸಿ ಕಾರಿನಲ್ಲಿ ತೆರಳಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ. ಆಗ ಕಾರಿನಲ್ಲಿದ್ದ ಒಬ್ಬಾತ ಇಳಿದು ಚೂರಿಯನ್ನು ತೋರಿಸಿ, ಕಾರಿನಲ್ಲಿ ಕುಳಿತುಕೊಳ್ಳದೇ ಇದ್ದರೇ ಕೊಲ್ಲುವುದಾಗಿ ಬೆದರಿಸಿ, ವಿದ್ಯಾರ್ಥಿಗಳಿಬ್ಬರನ್ನು ಅಪಹರಿಸಿದ್ದಾರೆ.

ನಂತರ ಇವರ ಮೊಬೈಲ್ ಕಿತ್ತುಕೊಂಡು ದೊಡ್ಡಣಗುಡ್ಡೆಯ ಪಾರ್ಕ್ ನಲ್ಲಿ ಇಬ್ಬರಿಗೆ ಹಲ್ಲೆ ನಡೆಸಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಒಬ್ಬ ತಪ್ಪಿಸಿಕೊಂಡು ಬಂದು ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿಯನ್ನು ಕಾಪು, ಶಿರ್ವದಲ್ಲಿ ಸುತ್ತಾಡಿಸಿ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜಕ್ರೀಯಾ, ರಜೀಂ, ಖಾಲೀದ್, ರೆಹಮಾನ್‌ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!