Wednesday, June 24, 2026
Homeಕರಾವಳಿಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ ನಲ್ಲಿ ದರೋಡೆ; ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಸ್ಥಳಕ್ಕೆ...

ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ ನಲ್ಲಿ ದರೋಡೆ; ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಸ್ಥಳಕ್ಕೆ ಭೇಟಿ

- Advertisement -
- Advertisement -

ಅಡ್ಯನಡ್ಕ: ಇಲ್ಲಿನ ಕರ್ನಾಟಕ ಬ್ಯಾಂಕ್‌ಗೆ ರಾತ್ರಿ ವೇಳೆ ದರೋಡೆಕೋರರು ದಾಳಿಮಾಡಿದ್ದು, ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಬ್ಯಾಂಕ್ ಸಿಬ್ಬಂದಿ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದು, ಹೆಚ್ಚಿನ ಪರಿಶೀಲನೆಗಾಗಿ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದು ತನಿಖೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ ನೀಡಿದ್ದು, ತನಿಖೆ ಕುರಿತು ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್‌ ಮಾತನಾಡಿ, ‘ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಿನ್ನೆ ರಾತ್ರಿಯ ವೇಳೆ ಕರ್ನಾಟಕ ಬ್ಯಾಂಕ್‌ನಲ್ಲಿ ಲಾಕರ್ ಮುರಿದು ಕಳ್ಳತನವಾಗಿದ್ದು, ವಿಧಿವಿಧಾನ ತಜ್ಞರು ತನಿಖೆ ಮುಂದುವರೆಸಿದ್ದಾರೆ. ಬ್ಯಾಂಕಿನ ಭದ್ರತಾ ಸಿಸ್ಟಮ್ ತುಂಬಾ ದುರ್ಬಲವಾಗಿದೆ. ಲಾಕರ್ ಫೆಸಿಲಿಟಿಗಳೆಲ್ಲವೂ ತುಂಬಾ ಭದ್ರವಾಗಿರಬೇಕು. ಇದಕ್ಕೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳನ್ನು ಎಲ್ಲಾ ಬ್ಯಾಂಕ್‌ಗಳು ಮಾಡಬೇಕು. ಬ್ಯಾಂಕಿನ ಹಿಂದಿನ ಕಿಟಕಿಯ ರಾಡನ್ನು ಎಕ್ಸೆರ್ ಬ್ಲಡ್ ಮೂಲಕ ಮುರಿದು ಒಳನುಗ್ಗಿದ ದರೋಡೆಕೋರರು ಬ್ಯಾಂಕ್‌ನ ಲಾಕರ್‌ನ್ನು ಗ್ಯಾಸ್‌ ಕಟ್ಟ‌ ಉಪಯೋಗಿಸಿ ಲಾಕರ್ ಮುರಿದಿದ್ದಾರೆ,” ಎಂದು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!