Wednesday, June 3, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ವಾಹನ ಸವಾರರ ದರೋಡೆ

ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ವಾಹನ ಸವಾರರ ದರೋಡೆ

- Advertisement -
- Advertisement -

ಚಾರ್ಮಾಡಿ :  ಅಪಘಾತವಾಗಿದ್ದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ ಅವರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಕಸಿದುಕೊಂಡು ಹೋಗಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮಧುಸೂದನ್ ಎಂಬುವವರು ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.

ಮೇ 3ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಮಧುಸೂದನ್ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ 12;30 ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಣ್ಣ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್ ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲೆ ಕುಳಿತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನು ಕೃತ್ಯ ಎಸಗಿದ 3 ಜನ ಬೆಳ್ತಂಗಡಿ ಮೂಲದ ‌ಮುಸ್ಲಿಂ ಯುವಕರು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!