Monday, October 12, 2026
Homeಕರಾವಳಿವಿಟ್ಲ; ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ವಿಟ್ಲ; ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ವಿಟ್ಲ; ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೇರಳದ ಕಣ್ಣೂರು ನಿವಾಸಿ ಅಬ್ದುಲ್‌ ನಾಸೀರ್‌(52) ಬಂಧಿತ ಆರೋಪಿ. ಆ ಮೂಲಕ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

ಬಂಧಿತ ಅಬ್ದುಲ್‌ ನಾಸೀರ್‌, ಸ್ಥಳೀಯ ಆರೋಪಿ ಸಿರಾಜುದ್ದೀನ್‌ ಹಾಗೂ ಪ್ರಧಾನ ಸೂತ್ರಧಾರಿ ಎಎಸ್‌ಐ ಮಧ್ಯೆ ಸಂಪರ್ಕ ಸೇತುವಾಗಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಸಿಂಗಾರಿ ಬೀಡಿ ಸಂಸ್ಥೆಯಲ್ಲಿ ಬೀಡಿ ಪ್ಯಾಕಿಂಗ್‌ ಕಾರ್ಯ ನಿರ್ವಹಿಸುತ್ತಿದ್ದ ಸಿರಾಜುದ್ದೀನ್‌ ತನ್ನ ಮಾಲೀಕನ ಮೇಲಿನ ಮನಸ್ತಾಪದಿಂದ ಕೆಲಸ ತ್ಯಜಿಸಿದ್ದ. ಜತೆಗೆ ಮಾಲೀಕನ ವಿರುದ್ಧ ಸೇಡು ತೀರಿಸಲು ಇ.ಡಿ.ಗೆ ದೂರು ನೀಡುವುದಾಗಿ ಹೇಳುತ್ತಿದ್ದ. ಸಿರಾಜುದ್ದೀನ್‌ನ ಸೇಡಿನ ವಿಚಾರವನ್ನು ಎಎಸ್‌ಐಗೆ ತಿಳಿಸಿ ಇಂತಹ ನಕಲಿ ಇಡಿ ದಾಳಿ ಸಂಘಟಿಸಲು ನಾಸೀರ್‌ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.


ಈ ಪ್ರಕರಣದಲ್ಲಿ ಈ ಹಿಂದೆ ಪೊಲೀಸರು ತ್ರಿಶೂರು ಕೊಡಂಗಲ್ಲೂರು ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿದ್ದ ಶಫೀರ್‌ ಬಾಬು (48), ಬಿ.ಸಿ.ರೋಡು ಪರ್ಲಿಯಾ ನಿವಾಸಿ ಮಹಮ್ಮದ್‌ ಇಕ್ಬಾಲ್‌(38), ಕೊಳ್ನಾಡು ಗ್ರಾಮ ನಿವಾಸಿ ಸಿರಾಜುದ್ದೀನ್‌ ನಾರ್ಶ(37), ಮಂಗಳೂರು ಪಡೀಲು ನಿವಾಸಿ ಮಹಮ್ಮದ್‌ ಅನ್ಸಾರ್‌ (27), ಕೇರಳದ ಕೊಟ್ಟಾಯಂ ನಿವಾಸಿಗಳಾದ ಅನಿಲ್‌ ಫೆರ್ನಾಂಡಿಸ್‌(49), ಸಚಿನ್‌ ಟಿ.ಎಸ್‌.(29) ಹಾಗೂ ಶಬಿನ್‌ ಎಸ್‌.(27) ಅವರನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!