Thursday, June 4, 2026
Homeಕರಾವಳಿಪುತ್ತೂರು ಸೇರಿದಂತೆ ಹಲವೆಡೆ ದರೋಡೆ ನಡೆಸಿದ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಪುತ್ತೂರು ಸೇರಿದಂತೆ ಹಲವೆಡೆ ದರೋಡೆ ನಡೆಸಿದ ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಪುತ್ತೂರು : ಇಲ್ಲಿನ ಬಲ್ನಾಡಿನಲ್ಲಿ ಉಜ್ರ್ಪಾದೆ ಶಿವಪ್ರಸಾದ್ ಭಟ್ ಎಂಬವರ ಮನೆಯಲ್ಲಿ ಫೆಬ್ರವರಿ 26 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಮ್ಮದ್ ಅಶ್ರಫ್ ಹಾಗೂ ಮೊಹಮ್ಮದ್ ಸಲಾಂ ಬಂಧಿತ ಆರೋಪಿಗಳು. ಇಬ್ಬರು ಪುತ್ತೂರಿನ ನಿವಾಸಿಗಳು.ಆರೋಪಿಗಳನ್ನು ವಿಶೇಷ ತನಿಖಾ ದಳ ವಿಚಾರಣೆ ನಡೆಸಿದಾಗ ವಿಟ್ಲ, ಬಲ್ನಾಡು ವಿಷ್ಣುಮೂರ್ತಿ ದೈವಸ್ಥಾನ, ಕಾವು ಸಿರಿ ಭೂಮಿ ಕೃಷಿ ಉತ್ಪನ್ನ ಅಂಗಡಿ, ಉತ್ತರಕನ್ನಡ, ಕೇರಳ ಹೀಗೆ ಬೇರೆ ಬೇರೆ ಕಡೆಗಳಲ್ಲಿ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಪಿಗಳಿಂದ 5 ಲಕ್ಷ ಮೌಲ್ಯದ ಚಿನ್ನಾಭರಣಗಳು, ಲ್ಯಾಪ್ ಟಾಪ್ , ಸಿಸಿ ಕ್ಯಾಮೆರಾ, ಹಾಗೂ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಇವರ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.ಘಟನೆ ನಡೆದು ಒಂದೇ ತಿಂಗಳಲ್ಲಿ ಪ್ರಕರಣ ಬೇಧಿಸಿಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಂಪ್ಯ ಪೊಲೀಸ್ ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ.

- Advertisement -

Latest News

error: Content is protected !!