Thursday, May 16, 2024
Homeಅಪರಾಧಚಾರ್ಮಾಡಿ ಘಾಟಿಯಲ್ಲಿ ದರೋಡೆ ಪ್ರಕರಣ; ಬಂಟ್ವಾಳದ ಮೂವರನ್ನು ಬಂಧಿಸಿದ ಪೊಲೀಸರು

ಚಾರ್ಮಾಡಿ ಘಾಟಿಯಲ್ಲಿ ದರೋಡೆ ಪ್ರಕರಣ; ಬಂಟ್ವಾಳದ ಮೂವರನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ ಅಪಘಾತವಾದ ವಾಹನದಲ್ಲಿದ್ದ ಸವಾರರನ್ನು ಬೆದರಿಸಿ ಹಣ ಉಂಗುರ ಹಾಗೂ ಮೊಬೈಲನ್ನು ಕಸಿದುಕೊಂಡು ಹೋಗಿರುವ ಘಟನೆ ಎ.5 ರಂದು ತಡರಾತ್ರಿ ನಡೆದಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಬಗ್ಗೆ ಬೆಂಗಳೂರಿನ ದೇವನಹಳ್ಳಿಯ ಮಧುಸೂದನ್ ಎಂಬುವರು ಬಣಕಲ್ ಠಾಣೆಗೆ ದೂರು ನೀಡಿದ್ದಾರೆ.

ಮೇ 3 ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ಹೊರಟಿದ್ದು ಚಾರ್ಮಾಡಿ ಘಾಟ್ ನಲ್ಲಿ 12.30 ರ ಸಮಯಕ್ಕೆ ರಸ್ತೆಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ.


ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಂಬುಲೆನ್ಸ್‌ಗೆ ಕರೆ ಮಾಡಲು ನೆಟ್ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲಿ ಕುಳಿತಿದ್ದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕಡೆಯಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು ಮೊಬೈಲ್, ಪರ್ಸ್, ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಟ್ವಾಳದ ಸೂರಕುಮೇರು ನಿವಾಸಿ ಮಹಮ್ಮದ್ ರಮೀಜ್, ಬಂಟ್ವಾಳದ ಸತ್ತಿಕಲ್ ಅಮೈ ನಿವಾಸಿ ಮಹಮ್ಮದ್ ರಜೀನ್, ಬಂಟ್ವಾಳದ ಕೆದಿಲ ನಿವಾಸಿ ಮಹಮ್ಮದ್ ಸವಾದ್ ಇವರನ್ನು ಪೋಲೀಸರು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!