Sunday, May 5, 2024
Homeಕರಾವಳಿಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ; ಸಾರ್ವಜನಿಕರೇ ಎಚ್ಚರ ಎಚ್ಚರ...!

ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ; ಸಾರ್ವಜನಿಕರೇ ಎಚ್ಚರ ಎಚ್ಚರ…!

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು ನಿನ್ನೆ ಬೆಳಗ್ಗೆಯಿಂದ ಸಂಜೆಯವರೆಗೆ ಒಟ್ಟು 6 ಮೊಬೈಲ್ ಗಳ ಸರಣಿ ಕಳ್ಳತನವಾಗಿದೆ.

ನಿನ್ನೆ ಬೆಳಿಗ್ಗೆ ಬೆಳ್ತಂಗಡಿಯಿಂದ ಉಜಿರೆ ಕಾಲೇಜಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಅಂಗನವಾಡಿ ಕಾರ್ಯಕರ್ತೆ ಜಲಜಾ ಎಂಬವರ ಪುತ್ರಿಯ ಬ್ಯಾಗ್ ನಿಂದ ಫೋನ್ ಅನ್ನು ಎಗರಿಸಿದ್ದು ಕಾಲೇಜಿಗೆ ತಲುಪಿದ ವೇಳೆ ಆಕೆಗೆ ಈ ವಿಚಾರ ತಿಳಿದು ಬಂದಿದೆ.

ಈ ಬಗ್ಗೆ ಜಲಜಾರವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಲ್ಲಿ ಅವರಿಗೆ ಇಂದು ಬೆಳಗ್ಗಿನಿಂದ ಸಂಜೆಯವರೆಗೆ ಒಟ್ಟು 6 ಮೊಬೈಲುಗಳು ಕಳೆದುಹೋಗಿರುವ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರು ಇನ್ನಾದರೂ ಈ ಬಗ್ಗೆ ಜಾಗರೂಕರಾಗಿ, ತಮ್ಮ ಬ್ಯಾಗ್ ಮತ್ತು ನಗದು ವಸ್ತಗಳ ಬಗ್ಗೆ ಎಚ್ಚರ ವಹಿಸುವುದು ಅವಶ್ಯಕವಾಗಿದೆ.

- Advertisement -
spot_img

Latest News

error: Content is protected !!