Friday, May 10, 2024
Homeಅಪರಾಧರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ; ಹಲವರಿಗೆ ಗಂಭೀರ...

ರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ; ಹಲವರಿಗೆ ಗಂಭೀರ ಗಾಯ

spot_img
- Advertisement -
- Advertisement -

ಗದಗ ಜಿಲ್ಲೆ ಲಕ್ಷೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆಯಲ್ಲಿ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ಮೂವರು ಅಭಿಮಾನಿಗಳಿಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ನಡೆದಿದೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಮೃತ ಯುವಕರು ಹನಮಂತ ಹರಿಜನ್ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19). ಗಂಭೀರ ಗಾಯಗಳಾದವರನ್ನು ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ‌ಎಂದು ಗುರುತಿಸಲಾಗಿದೆ.

ಯಶ್ ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸುವ ಹಿನ್ನೆಲೆಯಲ್ಲಿ ತಡರಾತ್ರಿ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್‌ ತಗುಲಿ ಸೂರಣಗಿ ಗ್ರಾಮದ ಮೂವರು ಯುವಕರು ಧಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ಬಗ್ಗೆ ಲಕ್ಷೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!