Sunday, June 7, 2026
Homeಮನರಂಜನೆನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪತ್ನಿಗೆ ಕೊರೊನಾ ಪಾಸಿಟಿವ್

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪತ್ನಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು :  ಮೊನ್ನೆಯಷ್ಟೇ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಪಾಸಿಟಿವ್ ಅಂತಾ ಗೊತ್ತಾಗುತ್ತಿದ್ದಂತೆ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಸುಗುಣ ಆಸ್ಪತ್ರೆಗೆ ಮುಂಜಾಗರೂಕತೆಯಿಂದ ದಾಖಲಾಗಿದ್ದರು.  ಇದರ ಬೆನ್ನಲ್ಲೇ ಇದೀಗ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಇರೋದು ಗೊತ್ತಾಗಿದೆ.

ರಾಕ್ ಲೈನ್ ವೆಂಕಟೇಶ್ ಅವರ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಕ್ ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಪಾಸಿಟಿವ್ ಅನ್ನೋ ಸುದ್ದಿ ಹಬ್ಬಿತ್ತು. ಇದನ್ನು ಅವರ ಮಗ ಯತೀಶ್ ನಿರಾಕರಿಸಿದ್ದಾರೆ. ತಾಯಿಗೆ ಸೋಂಕು ಇರುವುದು ದೃಢಪಟ್ಟಿದೆ. ತಂದೆ ಹೋಮ್ ಕ್ವಾರೆಂಟೈನ್‌ನಲ್ಲಿ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನು ರಾಕ್ ಲೈನ್ ಅವರ ಇನ್ನೊಬ್ಬ ಮಗ  ಅಭಿಲಾಷ್ ಸ್ವತಃ ವೈದ್ಯರಾಗಿದ್ದು ಅವರ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಅವರು ಮಹಾಲಕ್ಷ್ಮಿ ಲೇಔಟ್‌ನ ಮನೆಯಲ್ಲಿ ಕ್ವಾರೆಂಟೈನ್ ಆಗಿದ್ದಾರೆ.

- Advertisement -

Latest News

error: Content is protected !!