- Advertisement -
![]()
- Advertisement -
ಮಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಚಿಂತನ ಗಂಗಾ ಹೆಸರಿನಲ್ಲಿ ಸೇವಾಂಜಲಿ ಟ್ರಸ್ಟ್‌ನ ಸಹಕಾರದಲ್ಲಿ ಇಂದು ಮಂಗಳೂರಿನಲ್ಲಿಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ರೋಹಿತ್ ಚಕ್ರತೀರ್ಥ ಅವರನ್ನು ಸನ್ಮಾನಿಸಿದರೆ ಬಿಲ್ಲವ ಸಮಾಜ ತಕ್ಕ ಪಾಠ ಕಲಿಸಲಿದೆ ಎಂಬ ಎಚ್ಚರಿಕೆ ಒಂದೆಡೆಯಾದರೆ ಎಡಪಕ್ಷ ಮತ್ತು ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳು ಸನ್ಮಾನ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಸನ್ಮಾನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
- Advertisement -


