Monday, June 8, 2026
Homeತಾಜಾ ಸುದ್ದಿಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ ಶರ್ಮಾ; ಸಂತಸವನ್ನು ಟ್ವೀಟ್ ಮೂಲಕ ಹಂಚ್ಚಿಕೊಂಡ ಭಾರತ...

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ ಶರ್ಮಾ; ಸಂತಸವನ್ನು ಟ್ವೀಟ್ ಮೂಲಕ ಹಂಚ್ಚಿಕೊಂಡ ಭಾರತ ತಂಡದ ನಾಯಕ

- Advertisement -
- Advertisement -

ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಿ 15 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿದ್ದು, ತಮ್ಮ ಸಂತಸವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ರೋಹಿತ್ ಶರ್ಮಾ ಐರ್ಲೆಂಡ್ ವಿರುದ್ಧ 2007ರಲ್ಲಿ ಜೂನ್ 23 ರಂದು ಏಕದಿನ ಚೊಚ್ಚಲ ಪಂದ್ಯವನ್ನು ಆಡಿರುವುದಾಗಿ ನೆನಪಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಭಾರತ ಒಂಬತ್ತು ವಿಕೆಟ್‌ಗಳಿಂದ ಗೆದ್ದಿತ್ತು ಎಂಬುದನ್ನೂ ಅವರು ಈ ಮೂಲಕ ನೆನಪಿಸಿಕೊಂಡಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ರೋಹಿತ್ ಶರ್ಮಾ, ಎಲ್ಲರಿಗೂ ನಮಸ್ಕಾರ. ನನ್ನ ನೆಚ್ಚಿನ ಜೆರ್ಸಿಯಲ್ಲಿ 15 ವರ್ಷಗಳು ಕಳೆದಿದ್ದೇನೆ. ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ನಾನು ಭಾರತಕ್ಕೆ ಪ್ರವೇಶಿಸಿ ಇಂದಿಗೆ 15 ವರ್ಷಗಳನ್ನು ಪೂರೈಸಿದ್ದೇನೆ. ಇದೊಂದು ನನ್ನ ಅದ್ಭುತ ಪ್ರಯಾಣವಾಗಿದೆ. ಖಂಡಿತವಾಗಿ ನಾನು ನನ್ನ ಜೀವನದುದ್ದಕ್ಕೂ ಕಾಪಾಡಿಕೊಳ್ಳುತ್ತೇನೆ ಎಂದು ರೋಹಿತ್ ಭಾವುಕವಾಗಿ ಬರೆದಿದ್ದಾರೆ.

- Advertisement -

Latest News

error: Content is protected !!