Wednesday, June 3, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಕೊಲೆಗೆ ಯತ್ನಿಸಿದ ಆರೋಪಿಯ ಬಂಧನ

ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಕೊಲೆಗೆ ಯತ್ನಿಸಿದ ಆರೋಪಿಯ ಬಂಧನ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಉಮಾಪತಿ ಅವರ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಖ್ಯಾತ ರೌಡಿ ರಾಜೇಶ್ ಅಲಿಯಾಸ್ ಕರಿಯ ರಾಜೇಶ ಎಂಬಾತನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.

ರೌಡಿ ರಾಜೇಶ್ 2006 ರಿಂದ ದರೋಡೆ, ಮಾದಕ ದ್ರವ್ಯ ಮಾರಾಟ, ಕೊಲೆಗೆ ಸಂಚು ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ ಕಾಟನ್ ಪೇಟೆ, ಬಸವನಗುಡಿ ಠಾಣೆಯಲ್ಲಿ ದರೋಡೆ, ಕೊಲೆಯತ್ನ ಸೇರಿ 10 ಕೇಸ್ ದಾಖಲಾಗಿದೆ.

ಇತ್ತೀಚೆಗೆ ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ ಆರು ಪ್ರಕರಣಗಳಲ್ಲಿ ಕೋರ್ಟ್ ನಿಂದ ಖುಲಾಸೆಗೊಂಡಿದ್ದನು. ಸದ್ಯ, ಕೆಂಪೇಗೌಡ ನಗರ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಕಳೆದ ವರ್ಷ ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಈ ಸಂಬಂಧ ಉಮಾಪತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದರು. ಇದೇ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು.

- Advertisement -

Latest News

error: Content is protected !!