Thursday, June 4, 2026
Homeಕರಾವಳಿಉಪ್ಪಿನಂಗಡಿಯಲ್ಲಿ ತಂಡವೊಂದರಿಂದ ಗೂಂಡಾಗಿರಿ; ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ವ್ಯಕ್ತಿಗೆ ಹಲ್ಲೆ ಮಾಡಿದ ರೌಡಿ ಶೀಟರ್

ಉಪ್ಪಿನಂಗಡಿಯಲ್ಲಿ ತಂಡವೊಂದರಿಂದ ಗೂಂಡಾಗಿರಿ; ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ವ್ಯಕ್ತಿಗೆ ಹಲ್ಲೆ ಮಾಡಿದ ರೌಡಿ ಶೀಟರ್

- Advertisement -
- Advertisement -

ಉಪ್ಪಿನಂಗಡಿ; ಯುವಕರ ತಂಡವೊಂದು ಅಂಗಡಿಯೊಂದಕ್ಕೆ ನುಗ್ಗಿ ಗೂಂಡಾಗಿರಿ ಮಾಡಿದ ಘಟನೆ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ.

ರೌಡಿಶೀಟರ್ ಭರತ್ ಕುಮ್ಡೇಲು ಹಾಗೂ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಜಾಗದ ವಿಚಾರದಲ್ಲಿ ತಕರಾರು ತೆಗೆದು, ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ವ್ಯಕ್ತಿಗೆ ಹಲ್ಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹರೀಶ್ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರ ಮೇಲೆ ಹಲ್ಲೆ ಮಾಡಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಎಸ್ಸಿ- ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಭರತ್ ಕುಮ್ಡೇಲು ಬಂಟ್ವಾಳದಲ್ಲಿ ರೌಡಿ ಶೀಟರ್ ಆಗಿದ್ದಾನೆ.2017ರಲ್ಲಿ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

- Advertisement -

Latest News

error: Content is protected !!