ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವುದು ಹಾಗೂ ಶಂಕಿತ ಭಯೋತ್ಪಾದಕನಿಗೆ ಸ್ಯಾಟ್‍ಲೈಟ್ ಫೋನ್ ಬಳಕೆ ಪ್ರಕರಣದಲ್ಲಿ ಒಬ್ಬರನ್ನು ಎತ್ತಂಗಡಿ ಮಾಡಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.
ಪರಪ್ಪನ ಅಗ್ರಹಾರದ ಮುಖ್ಯ ಅಧೀಕ್ಷಕ ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೆ ಜೈಲಿನ ಮುಖ್ಯ ಅಧೀಕ್ಷ, ಜೈಲು ಮುಖ್ಯ ಅಧೀಕ್ಷಕ- ಸುರೇಶ್ ಎತ್ತಂಗಡಿಯಾಗಿದ್ದರೆ, ಜೈಲು ಅಧೀಕ್ಷಕ ಮಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ.
ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮರುಕಳಿಸುತ್ತಿರುವ ಈ ಪ್ರಕರಣಗಳ ಬಗ್ಗೆ ಕೂಲಂಕುಷ ತನಿಖೆಗೆ ನಡೆಸಿ ಒಂದು ತಿಂಗಳೊಳಗೆ ಸಮಗ್ರ ವರದಿ ನೀಡುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೆಂದ್ರ ನೇತೃತ್ವದಲ್ಲಿ ನಾಲ್ವರು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹಸಚಿವ ಪರಮೇಶ್ವರ್ ಅವರು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಮಾಹಿತಿಯನ್ನ ನೀಡಿದರು.
ಈಗಾಗಲೇ ಎಲ್ಲಾ ಜೈಲುಗಳಲ್ಲಿ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಕೇಂದ್ರ ಕಚೇರಿಗೆ ಸಂಪರ್ಕಿಸಿ ಅವನ್ನು ನಿಗಾವಹಿಸಲು ಬಂಧಿಖಾನೆ ಇಲಾಕೆಯ ಎಡಿಜಿಪಿ ಕಚೇರಿಯಲ್ಲಿ ಕಮ್ಯಾಂಡಿಂಗ್ ಸೆಂಟರ್‍ನ್ನು ಸ್ಥಾಪಿಸಲಾಗುವುದು. ಇದರಿಂದಾಗಿ ಜೈಲಿನ ಚಟುವಟಿಕೆಗಳನ್ನು ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನೇರವಾಗಿ ವೀಕ್ಷಿಸಬಹುದಾಗಿದೆ. ಈ ವ್ಯವಸ್ಥೆ ರೂಪಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.


