ಮಂಗಳೂರು: ದ.ಕ. ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ದ.ಕ. ಜಿಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರದಂದು ಜಿಲ್ಲಾ ಸಮಾಲೋಚನಾ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (ಡಿಎಲ್‌ಆರ್‌ಸಿ) ಸಭೆಯನ್ನ ಹಮ್ಮಿಕೊಳ್ಳಲಾಗಿದ್ದು ಈ ಸಭೆಯ ಅಧ್ಯಕ್ಷತೆಯನ್ನ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ 10 ವರ್ಷ ಹಳೆಯ ವಹಿವಾಟು ರಹಿತ ಖಾತೆಗಳಲ್ಲಿ ಸುಮಾರು 140 ಕೋಟಿ ರೂ.ಗಳಿದ್ದು, ಅದನ್ನು ಸಂಬಂಧಪಟ್ಟ ಗ್ರಾಹಕರು ಪಡೆದುಕೊಳ್ಳುವಲ್ಲಿ ಬ್ಯಾಂಕ್‌ಗಳು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.
ದೇಶದ ವಿವಿಧ ಬ್ಯಾಂಕ್‌ಗಳಲ್ಲಿ 10 ವರ್ಷ ಮೇಲ್ಪಟ್ಟು ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 78000 ಕೋಟಿ ರೂ. ಠೇವಣಿ ಇದ್ದು, ಕರ್ನಾಟಕದಲ್ಲಿ ಇದು 3400 ಕೋಟಿರೂ.ಗಳಾಗಿದ್ದು, ದ.ಕ. ಜಿಲ್ಲೆಯಲ್ಲಿ 140 ಕೋಟಿ ರೂ. ಇದೆ. ಇದಲ್ಲದೆ ಇನ್ಸೂರೆನ್ಸ್, ಶೇರ್‌ಗಳು ಕೂಡಾ ಇದ್ದು ಇವಗಳನ್ನು ಗ್ರಾಹಕರಿಗೆ ಹಿಂತಿರುಗಿಸಲು ಸೂಕ್ತ ಕ್ರಮಗಳನ್ನು ವಹಿಸಬೇಕು ಎಂದು ಅವರು ಹೇಳಿದರು.


