- Advertisement -
- Advertisement -
ಪುತ್ತೂರಿನ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಾರತಮ್ಯ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಹಮ್ಮಿಕೊಂಡಿರುವ ‘ಪುತ್ತೂರು ಚಲೋ’ ಪ್ರತಿಭಟನಾ ಮೆರವಣಿಗೆ ಸೋಮವಾರ ಬೆಳಿಗ್ಗೆ ಆರಂಭವಾಯಿತು.
ದರ್ಬೆಯಿಂದ ಹೊರಟ ಈ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪೊಲೀಸರು ಕೆಲವು ಷರತ್ತುಗಳನ್ನು ವಿಧಿಸಿ ಮೆರವಣಿಗೆಗೆ ಅನುಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
- Advertisement -


