ಮಂಗಳೂರು; ಜೂ.26ರಂದು ಮಂಗಳೂರಿನಲ್ಲಿ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರದ ಸಂಘಟನೆಗಳ ಸಮನ್ವಯ ಬೈಠಕ್ ಸಂಘನಿಕೇತನದಲ್ಲಿ ನಡೆಯಲಿದೆ.
ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹಿತ ಬಿಜೆಪಿ ಹಾಗೂ ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿಯಿಂದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಪ್ರಭಾರಿ, ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ ಇತರೆ ಪರಿವಾರ ಸಂಘಟನೆಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸ್ತರದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಮೂರು ತಿಂಗಳಿಗೊಮ್ಮೆ ಸಮನ್ವಯ ಬೈಠಕ್ ನಡೆಯುವುದು ವಾಡಿಕೆಯಾಗಿದ್ದು, ಕಳೆದ ಒಂದು ವರ್ಷದಿಂದ ನಾನಾ ಕಾರಣಗಳಿಗೆ ಸಮನ್ವಯ ಬೈಠಕ್ ನಡೆದಿಲ್ಲ. ಈ ಬಾರಿಯ ಬೈಠಕ್ ಜಿಲ್ಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ರಾಜಕೀಯ ಹಾಗೂ ಸಂಘಪರಿವಾರದ ಸಂಘಟನೆಗಳ ಚಟುವಟಿಕೆ ಹಿನ್ನೆಲೆಯಲ್ಲಿ ಭಾರಿ ಮಹತ್ವ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.


