Thursday, June 25, 2026
Homeಕರಾವಳಿಮಂಗಳೂರುರಬ್ಬರ್ ಬೆಳೆಯನ್ನು ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಲು ಶಿಫಾರಸು; ವಿಧಾನಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ...

ರಬ್ಬರ್ ಬೆಳೆಯನ್ನು ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಲು ಶಿಫಾರಸು; ವಿಧಾನಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆಗೆ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಉತ್ತರ

- Advertisement -
- Advertisement -

ಬೆಂಗಳೂರು: ರಬ್ಬರ್ ಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ ರಬ್ಬರ್ ಮಂಡಳಿಯು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ರಬ್ಬರ್ ಬೋರ್ಡ್ ಗೆ ರಾಜ್ಯ ಸರ್ಕಾರದಿಂದ ಶಿಫಾರಸು ಮಾಡಲಾಗುವುದು ಎಂದು ಉತ್ತರ ನೀಡಿದ್ದಾರೆ.

ರಬ್ಬರ್ ಬೆಳೆಯನ್ನು ತೋಟಗಾರಿಕಾ ಬೆಳೆಗಳ ವ್ಯಾಪ್ತಿಗೆ ಒಳಪಡಿಸಿ ಬೆಳೆ ಸ್ಥಿರೀಕರಣ ನಿಧಿ ಸ್ಥಾಪಿಸಿ ರಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಹಾಗೂ ರಬ್ಬರ್ ಕೃಷಿಗೆ ಹವಾಮಾನ ಆಧಾರಿತ ವಿಮಾ ಸೌಲಭ್ಯ ಒದಗಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಸದನದಲ್ಲಿ ರಾಜ್ಯ ಸರ್ಕಾರವನ್ನು ಕೋರಿದರು.

ವಾಣಿಜ್ಯ ಬೆಳೆಯಾದ ರಬ್ಬರ್ ನ ಬೆಲೆ ವಿಷಯವು ಬಹುಪಾಲು ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ರಬ್ಬರ್ ಬೆಳೆಯವ ರೈತರು ತೊಂದರೆಗಳನ್ನು ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ರಬ್ಬರ್ ಬೆಳೆಯು ಬಹುವಾರ್ಷಿಕ ವಾಣಿಜ್ಯ ಬೆಳೆಯಾಗಿದ್ದು, ಪ್ಲಾಂಟೇಷನ್ ಬೆಳೆಯಾಗಿದೆ. ಈ ಬೆಳೆಯು ಕೇಂದ್ರ ಸರ್ಕಾರದ ಸಂಸ್ಥೆಯಾದ ರಬ್ಬರ್ ಮಂಡಳಿ ವ್ಯಾಪ್ತಿಗೆ ಒಳಪಟ್ಟಿದ್ದು, ರಬ್ಬರ್ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳನ್ನು ರಬ್ಬರ್ ಮಂಡಳಿ ಅನುಷ್ಠಾನಗೊಳಿಸುತ್ತಿದೆ ಎಂದು ಸಚಿವ ಮಲ್ಲಿಕಾರ್ಜುನ ಸದನಕ್ಕೆ ವಿವರಿಸಿದರು.

- Advertisement -

Latest News

error: Content is protected !!