Monday, June 15, 2026
Homeಕರಾವಳಿಉಳ್ಳಾಲ: ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯ ವರ್ತನೆ: ಬಸ್‌ ಕ್ಲೀನರ್ ಅರೆಸ್ಟ್‌

ಉಳ್ಳಾಲ: ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯ ವರ್ತನೆ: ಬಸ್‌ ಕ್ಲೀನರ್ ಅರೆಸ್ಟ್‌

- Advertisement -
- Advertisement -

ಉಳ್ಳಾಲ: ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್‌ ಕ್ಲೀನರ್‌ ನನ್ನು ಅರೆಸ್ಟ್‌ ಮಾಡಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.  

ಬಜ್ಜೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ ಆರೋಪಿ.

ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ವೈದ್ಯೆಯೊಬ್ಬರು, ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬಸ್‌ ಉಳ್ಳಾಲ ಠಾಣಾ ವ್ಯಾಪ್ತಿ ತಲುಪಿದಾಗ ಅಲ್ಲಿ ಬಸ್‌ ಕ್ಲೀನರ್‌, ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವೈದ್ಯೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!