Saturday, June 6, 2026
Homeತಾಜಾ ಸುದ್ದಿಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಕಳ್ಳರ ಬಗ್ಗೆ ವದಂತಿ: ಪೋಷಕರಲ್ಲಿ ಆತಂಕ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಕಳ್ಳರ ಬಗ್ಗೆ ವದಂತಿ: ಪೋಷಕರಲ್ಲಿ ಆತಂಕ

- Advertisement -
- Advertisement -

ಬೆಳ್ತಂಗಡಿ: ಕಳೆದ ಕೆಲ ದಿನಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬುತ್ತಿದ್ದಂತೆ ಪೋಷಕರಲ್ಲಿ ಆತಂಕ ಶುರುವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಬಂಗಾಡಿ ಸರಕಾರಿ ಪ್ರೌಢಶಾಲೆಯ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ. ಪೋಷಕರೇ ಜಾಗೃತರಾಗಿ ಎಂಬ ವದಂತಿ ಹಬ್ಬುತ್ತಿದೆ. ಕಳೆದ ಸೋಮವಾರ ಬಂಗಾಡಿ ಪ್ರೌಢ ಶಾಲೆಯ ಬಳಿ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕಾರು ನಿಲ್ಲಿಸಿ ವಿದ್ಯಾರ್ಥಿಯನ್ನು ಬೆದರಿಸಿದ್ರು ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿಗಳು ಈ ವಿಚಾರವನ್ನ ಪೋಷಕರಲ್ಲಿ ತಿಳಿಸಿದ್ದು, ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!