Tuesday, May 14, 2024
Homeಕರಾವಳಿಉಡುಪಿಕಾಪು: ಅರ್ಧಕ್ಕೆ ನಿಂತ ಕಾಮಗಾರಿ: ಹೆದ್ದಾರಿ ಪಕ್ಕದ ಮನೆಗಳಿಗೆ ನುಗ್ಗಿದ ನೀರು

ಕಾಪು: ಅರ್ಧಕ್ಕೆ ನಿಂತ ಕಾಮಗಾರಿ: ಹೆದ್ದಾರಿ ಪಕ್ಕದ ಮನೆಗಳಿಗೆ ನುಗ್ಗಿದ ನೀರು

spot_img
- Advertisement -
- Advertisement -

ಕಾಪು: ಅರ್ಧಂಬರ್ಧ ಹೆದ್ದಾರಿ ಕಾಮಗಾರಿಯಿಂದ ಮನೆಗಳಿಗೆ ಮಳೆ ನೀರು ನುಗ್ಗಿದ ಘಟನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಹೆದ್ದಾರಿ ಪಕ್ಕದ ನಿವಾಸಿ ಪ್ರಕಾಶ್ ದೇವಾಡಿಗ ಅವರ ಮನೆಗೆ ಕೃತಕ ನೆರೆ ನೀರು ನುಗ್ಗಿದೆ.

ಉಚ್ಚಿಲ ಪೆಟ್ರೋಲ್ ಬಂಕ್ ನಿಂದ ಪೋಸ್ಟ್ ಆಫೀಸ್ ವರೆಗೆ ಎರಡು ಕಿಲೋಮೀಟರ್ ಉದ್ದದ ಸರ್ವಿಸ್ ರಸ್ತೆ ನಿರ್ಮಾಣ ಆಗುತ್ತಿದ್ದು,  ಕಳೆದ ಒಂದು ವರ್ಷದಿಂದ ಎರಡು ಕಿಲೋಮೀಟರ್ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಹೆದ್ದಾರಿಯ ಇಕ್ಕೆಲಗಳಲ್ಲಿ ಗುತ್ತಿಗೆದಾರರು ಅಗೆದಿದ್ದು, ಮಳೆ ನೀರು ಸಾಗುವ ಹಾದಿಯನ್ನು ಮುಚ್ಚಲಾಗಿದೆ. ಇದರಿಂದ ಹೆದ್ದಾರಿ ಪಕ್ಕದ ಮನೆಗಳಿಗೆ ನೀರು ನುಗ್ಗುತ್ತಿದೆ. ಮಾತ್ರವಲ್ಲ ,ಕಾಮಗಾರಿ ಪೂರ್ಣಗೊಳಿಸದ ಕಾರಣ ಹೆದ್ದಾರಿ ಪಕ್ಕದಲ್ಲಿ ಸಂಚರಿಸುವವರಿಗೂ ಅಪಾಯ ಕಟ್ಟಿಟ್ಡ ಬುತ್ತಿ. ಈ ಬಗ್ಗೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಬಂದು ಅವ್ಯವಸ್ಥೆಯನ್ನು ಸರಿಪಡಿಸಬೇಕಿದೆ.

- Advertisement -
spot_img

Latest News

error: Content is protected !!