Tuesday, May 14, 2024
Homeಕರಾವಳಿಮಂಗಳೂರಿನ ಯುವತಿ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ!

ಮಂಗಳೂರಿನ ಯುವತಿ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ!

spot_img
- Advertisement -
- Advertisement -

ಮಂಗಳೂರು : ಮಂಗಳೂರಿನ ಯುವತಿ ರುತ್ ಕ್ಯಾರ್ ಡಿಸಿಲ್ವ ಅವರು ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.

ರುತ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ, ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ಲಾ ಮತ್ತು ರಫರ್ಟ್ ಡಿಸಿಲ್ಲಾ ದಂಪತಿಯ ಪುತ್ರಿಯಾಗಿದ್ದಾಳೆ.

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದು, ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು ಎದುರಿಸಿದ್ದ ಆಕೆ ಛಲ ಬಿಡದೆ ಮತ್ತೆ ಪರೀಕ್ಷೆಯನ್ನು ಎದುರಿಸಿ ಸಾಧಿಸಿ ತೋರಿಸಿದ್ದಾರೆ ಎಂದು ಆಕೆಯ ಮಾರ್ಗದರ್ಶಕ ಹಾಗೂ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ (ಸಿಐಎಲ್)ನ ಸಂಚಾಲಕ, ನಂದಗೋಪಾಲ್ ಅಭಿಪ್ರಾಯ ತಿಳಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿಪಿಟಿ ಪರೀಕ್ಷೆಯಲ್ಲಿ ರುತ್ ಜಿಲ್ಲೆಗೆ ಪ್ರಥಮ ಶ್ರೇಣಿ ಗಳಿಸಿದ್ದರು. ಸೈಂಟ್ ತೆರೆಸಾದಲ್ಲಿ ಶಾಲಾ ವಿದ್ಯಾಭ್ಯಾಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣದಿಂದ ಪದವಿ ಶಿಕ್ಷಣ ಪಡೆದಿದ್ದಾರೆ.

ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತಾದರೂ ನಾನು ಅತ್ಯುತ್ತಮವಾಗಿ ಪರೀಕ್ಷೆಯನ್ನು ಬರೆದಿದ್ದೆ. ಆದರೆ ಪ್ರಥಮ ಶ್ರೇಣಿ ನಿರೀಕ್ಷೆ ಮಾಡಿರಲಿಲ್ಲ. ಸಿಎ ಪರೀಕ್ಷೆಯನ್ನು ತೇರ್ಗಡೆಯಾಗುವುದೇ ಅದ್ಭುತ, ಎಂದು ರುತ್ ಡಿಸಿಲ್ವಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!