Thursday, June 4, 2026
Homeತಾಜಾ ಸುದ್ದಿವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿಪ್ರಮಾಣವಚನ ಸ್ವೀಕರಿಸಿದ ಆರ್ ವಿ ದೇಶಪಾಂಡೆ

ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿಪ್ರಮಾಣವಚನ ಸ್ವೀಕರಿಸಿದ ಆರ್ ವಿ ದೇಶಪಾಂಡೆ

- Advertisement -
- Advertisement -

ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದ್ದು ವಿಧಾನಸಭೆಯ ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಅಲ್ಲದೇ ಹಂಗಾಮಿ ಸ್ಪೀಕರ್ ಆಗಿ ಆರ್ ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿತ್ತು.

ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುನ್ನಾ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಂಗಾಮಿ ಸ್ವೀಕರ್ ಆರ್ ವಿ ದೇಶಪಾಂಡೆ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು.

- Advertisement -

Latest News

error: Content is protected !!