Saturday, June 6, 2026
Homeಕರಾವಳಿರಾಜಕೀಯ ನಿವೃತ್ತಿ ಘೋಷಿಸಿದ ಸುಳ್ಯದ ಬಂಗಾರ ಎಸ್ ಅಂಗಾರ

ರಾಜಕೀಯ ನಿವೃತ್ತಿ ಘೋಷಿಸಿದ ಸುಳ್ಯದ ಬಂಗಾರ ಎಸ್ ಅಂಗಾರ

- Advertisement -
- Advertisement -

ಸುಳ್ಯ ಬಂಗಾರವೆಂದೇ ಖ್ಯಾತಿ ಗಳಿಸಿರುವ ಸಚಿವ, ಶಾಸಕ ಎಸ್ ಅಂಗಾರ ಅವರು ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.   ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ.

ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಭಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು. ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!