Monday, August 31, 2026
Homeಕರಾವಳಿಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಲ್ಲಿ ವಾಚ್ ಮೆನ್ ಆಗಿದ್ದ ಹೂವಯ್ಯ ಗೌಡ ಹೃದಯಾಘಾತದಿಂದ...

ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಲ್ಲಿ ವಾಚ್ ಮೆನ್ ಆಗಿದ್ದ ಹೂವಯ್ಯ ಗೌಡ ಹೃದಯಾಘಾತದಿಂದ ನಿಧನ

- Advertisement -
- Advertisement -

ಬೆಳ್ತಂಗಡಿ ಉಜಿರೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಎಸ್ ಡಿ ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ 4.45ರ ವೇಳೆಗೆ ಹೂವಯ್ಯ ಗೌಡ ಕುಸಿದು ಬಿದ್ದಿದ್ದರು.

ಕೂಡಲೇ ಅಲ್ಲಿದ್ದ ವಿದ್ಯಾರ್ಥಿಗಳು ಅವರನ್ನು ಆಟೋ ರಿಕ್ಷಾದಲ್ಲಿ ಉಜಿರೆ ಎಸ್ ಡಿ ಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸುವ ವೇಳೆ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ಕಳೆದ 6 ತಿಂಗಳಿಂದ ಹೂವಯ್ಯ ಗೌಡ ಬಿಪಿ ಹಾಗೂ ಶುಗರ್ ನಿಂದ ಬಳಲುತ್ತಿದ್ದರು.ಆದರೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

- Advertisement -

Latest News

error: Content is protected !!