Wednesday, June 24, 2026
Homeತಾಜಾ ಸುದ್ದಿಕೊರೋನಾ ಚಿಕಿತ್ಸೆಗಾಗಿ ಸಚಿವ ಎಸ್ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

ಕೊರೋನಾ ಚಿಕಿತ್ಸೆಗಾಗಿ ಸಚಿವ ಎಸ್ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದಂತ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ನಂತರದಲ್ಲಿ ಸಚಿವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯ ಸಲಹೆಯ ಮೇರೆಗೆ ಇದೀಗ ಹೋಂ ಐಸೋಲೇಷನ್ ನಿಂದ ಆಸ್ಪತ್ರೆಗೆ ದಾಖಲಾಗಿ ಸಚಿವ ಸುರೇಶ್ ಕುಮಾರ್ ಚಿಕಿತ್ಸೆ ಪಡೆಯಲಿದ್ದಾರೆ.


ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಅಕ್ಟೋಬರ್ 5ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಂತ ಸಚಿವರು, ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು.

- Advertisement -

Latest News

error: Content is protected !!