Saturday, June 6, 2026
Homeಕರಾವಳಿಬೆಳ್ತಂಗಡಿ: ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಗೋಧೂಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಜ. 27 ರಂದು ಬುಧವಾರ ಸಂಜೆ 6.50 ಸಮಯಕ್ಕೆ ಆಯೋಜಿಸಲಾಗಿದೆ.


ಈ ಸಂದರ್ಭದಲ್ಲಿ ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆ ಹಾಗೂ ಮಂಗಳಸೂತ್ರ ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ನೋಡಿಕೊಳ್ಳಲಾಗುತ್ತಿದೆ. ಇಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ.


ಪ್ರತಿ ವರ್ಷದಂತೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗಡೆಯವರ ಸಮ್ಮುಖದಲ್ಲಿ ಈ ಕಾರ್ಯ ನಡೆಯಲಿದ್ದು, ಈ ತನಕ 12,393 ಜೋಡಿ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿದ್ದು, ಸುಖ ಶಾಂತಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲಿ ಇಚ್ಚಿಸುವವರು ಏ.15 ರ ಒಳಗೆ ವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಯೊಂದಿಗೆ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08256-266644 ಮತ್ತು ವಾಟ್ಸ್ ಆಪ್ ಸಂಖ್ಯೆ: 8147263422 ಕ್ಕೆ ಸಂಪರ್ಕಿಸಬಹುದು.

- Advertisement -

Latest News

error: Content is protected !!