Sunday, May 5, 2024
Homeಕರಾವಳಿಉಡುಪಿಉಡುಪಿಯ ಕಲಾವಿದನ ಕೈಚಳಕಕ್ಕೆ ಫಿದಾ ಆದ ಮಾಸ್ಟರ್ ಬ್ಲಾಸ್ಟರ್: ಯುವಕನಿಗೆ ಬಂತು ಸಚಿನ್ ತೆಂಡುಲ್ಕರ್ ಕಡೆಯಿಂದ...

ಉಡುಪಿಯ ಕಲಾವಿದನ ಕೈಚಳಕಕ್ಕೆ ಫಿದಾ ಆದ ಮಾಸ್ಟರ್ ಬ್ಲಾಸ್ಟರ್: ಯುವಕನಿಗೆ ಬಂತು ಸಚಿನ್ ತೆಂಡುಲ್ಕರ್ ಕಡೆಯಿಂದ ಪ್ರಶಂಸಾ ಪತ್ರ

spot_img
- Advertisement -
- Advertisement -

ಉಡುಪಿ: ಉಡುಪಿಯ ವಿಶಿಷ್ಟ ಚಿತ್ರ ಕಲಾವಿದರೊಬ್ಬರ ಕವಾ ಪ್ರೌಢಿಗೆ ಕ್ರಿಕೆಟ್ ಲೋಕದ ದಂತಕತೆ ಸಚಿನ್ ತೆಂಡೂಲ್ಕರ್ ಫಿದಾ ಆಗಿದ್ದಾರೆ.

ಕಲಾವಿದ ಮಹೇಶ್ ಮರ್ಣೆ ಅಶ್ವತ್ಥದ ಎಲೆಯಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರವನ್ನು ರಚಿಸುವ ಮೂಲಕ ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ್ದಾರೆ. ಅಶ್ವತ್ಥ ಎಲೆಯಲ್ಲಿ ಭಾವಚಿತ್ರಗಳನ್ನು ಮೂಡಿಸುವಲ್ಲಿ ಮಹೇಶ್ ಸಿದ್ಧಹಸ್ತ ಕಲಾವಿದ. 2015ರಲ್ಲಿ ಐಸ್ ಕ್ರೀಮ್ ಕಡ್ಡಿಗಳು ಮತ್ತು ಬೆಂಕಿ ಕಡ್ಡಿಗಳಿಂದ ರಚಿಸಿದ ಗಣಪತಿಯ ಕಲಾಕೃತಿಯ ಮೂಲಕ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಕೂಡಾ ಸೇರ್ಪಡೆಯಾಗಿದ್ದರು.

ಅತ್ಯಂತ ಸೂಕ್ಷ್ಮವಾಗಿ ಅಶ್ವತ್ಥದ ಎಲೆಯಲ್ಲಿ ವಿವಿಧ ಮುಖಗಳ ಪಡೆಯಚ್ಚು ಮೂಡಿಸುವುದರಲ್ಲಿ ಮಹೇಶ್ ನೈಪುಣ್ಯತೆ ಸಾಧಿಸಿದ್ದಾರೆ. ಕೇವಲ ಏಳು ನಿಮಿಷಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರವನ್ನು ರಚಿಸುವ ಮೂಲಕ ಇವರ ಈ ಕಲಾಕೃತಿ ಎಕ್ಸ್ ಕ್ಲೂಸಿವ್ ವಲ್ಡ್ ರೆಕಾರ್ಡ್ ಪುಟ ಸೇರಿತ್ತು.

ಉತ್ತರಪ್ರದೇಶದ ಬರೇಲಿಯ ಲಾಟ ಪ್ರತಿಷ್ಠಾನಕ್ಕೆ ಅಶ್ವತ್ಥ ಎಲೆಯ ಮೂಲಕ ರಚಿಸಿದ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರದ ವಿಡಿಯೋವನ್ನು ಕಳುಹಿಸಲಾಗಿತ್ತು. ಈ ಸೂಕ್ಷ್ಮ ಕಲಾಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಂಸ್ಥೆ ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಗೆ ಮರ್ಣೆ ಅವರ ಹೆಸರನ್ನು ಸೇರ್ಪಡೆಗೊಳಿಸಿತ್ತು.

ಈ ದಾಖಲೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿನ್ ತೆಂಡೂಲ್ಕರ್ ಮಹೇಶ್ ಮರ್ಣೆ ಅವರಿಗೆ ಪ್ರಶಂಸಾ ಪತ್ರವನ್ನು ಕಳುಹಿಸಿದ್ದಾರೆ.  “ನನ್ನ ಮೇಲೆ ಪ್ರೀತಿ ಇಟ್ಟು ನೀವು ರಚಿಸಿರುವ ಕಲಾಕೃತಿ ಕಂಡು ನಾನು ಬೆರಗಾಗಿದ್ದೇನೆ. ನೀವು ನನ್ನ ಮೇಲೆ ತೋರಿಸಿರುವ ಪ್ರೀತಿಗೆ ಪ್ರತಿಯಾಗಿ ನನ್ನ ಸಂಗ್ರಹದಲ್ಲಿರುವ ಎರಡು ಅಮೂಲ್ಯ ಫೋಟೋಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ನನ್ನ ಎರಡನೇ ಇನ್ನಿಂಗ್ಸ್ ಗೂ ಕೂಡಾ ನೀವು ತೋರಿಸುತ್ತಿರುವ ಪ್ರೀತಿ ಮತ್ತು ಬೆಂಬಲ ನನಗೆ ಪ್ರೇರಣೆಯಾಗಿದೆ” ಹೀಗೆಂದು ಬರೆದು, ಹಸ್ತಾಕ್ಷರ ಮಾಡಿದ ಪತ್ರವನ್ನು ಕಳುಹಿಸಿದ್ದಾರೆ.

ತನ್ನ ವೃತ್ತಿಜೀವನದಲ್ಲಿ 100ನೇ ಸೆಂಚುರಿ ಬಾರಿಸಿರುವ ಕ್ಷಣದ ಅಮೂಲ್ಯ ಭಾವಚಿತ್ರದ ಜೊತೆಗೆ ವರ್ಲ್ಡ್ ಕಪ್ ಎತ್ತಿರುವ ಮತ್ತೊಂದು ಚಿತ್ರವನ್ನು ಕೂಡ ಪತ್ರದ ಜೊತೆ ಲಗತ್ತಿಸಿ ಕಳುಹಿಸಿದ್ದಾರೆ.

- Advertisement -
spot_img

Latest News

error: Content is protected !!