Sunday, June 7, 2026
Homeತಾಜಾ ಸುದ್ದಿರಾಜಸ್ಥಾನ: ಉಪಮುಖ್ಯಮಂತ್ರಿ, ಪಿಸಿಸಿ ಅಧ್ಯಕ್ಷ ಸ್ಥಾನದಿಂದ ಸಚಿನ್‌ ಪೈಲಟ್‌ ಅಮಾನತು

ರಾಜಸ್ಥಾನ: ಉಪಮುಖ್ಯಮಂತ್ರಿ, ಪಿಸಿಸಿ ಅಧ್ಯಕ್ಷ ಸ್ಥಾನದಿಂದ ಸಚಿನ್‌ ಪೈಲಟ್‌ ಅಮಾನತು

- Advertisement -
- Advertisement -

ಜೈಪುರ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಉಲ್ಬಣವಾಗಿದ್ದು, ಬಂಡಾಯವೆದ್ದಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ರನ್ನು ಉಪ ಮುಖ್ಯಮಂತ್ರಿ ಹಾಗೂ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅಮಾನತು ಮಾಡಲಾಗಿದೆ ಎಂದು ಎಐಸಿಸಿ ಘೋಷಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಸಚಿವ ‘ಸತ್ಯಕ್ಕೆ ತೊಂದರೆ ನೀಡಬಹುದು ಆದರೆ ಸೋಲಿಸಲಾಗದು ಎಂದು ತಿರುಗೇಟು ನೀಡಿದ್ದಾರೆ.

ಈ ಮೂಲಕ ಕಾಂಗ್ರೆಸ್‌ನಿಂದ ಭಾಗಶಃ ಹೊರ ಹೋಗಿರುವ ಸಂದೇಶವನ್ನು ಸಚಿವ ಪೈಲಟ್ ನೀಡುತ್ತಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಸಾರಿರುವ ಸಚಿನ್ ದೆಹಲಿಯ ಸಮೀಪದ ಹೋಟೆಲ್ ಒಂದರಲ್ಲಿ ತಮ್ಮ ಬೆಂಬಲಿಗರೊಂದಿಗೆ ವಾಸ್ತವ್ಯ ಹೂಡಿದ್ದರು.

15ಕ್ಕೂ ಹೆಚ್ಚು ಶಾಸಕರನ್ನು ತಮ್ಮೊಂದಿಗೆ ಕರೆದೊಯ್ದು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಸಚಿನ್‌ ಪೈಲಟ್‌ ಅವರ ನಡೆಯಿಂದಾಗಿ ಅಶೋಕ್‌ ಗೆಹ್ಲೋಟ್‌ ಅವರ ನೇತೃತ್ವದ ರಾಜಸ್ಥಾನ ಕಾಂಗ್ರೆಸ್‌ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

- Advertisement -

Latest News

error: Content is protected !!