Thursday, August 27, 2026
Homeತಾಜಾ ಸುದ್ದಿಬೆಳಗಾವಿಯಲ್ಲಿ ಸಚಿನ್‌ ತೆಂಡೂಲ್ಕರ್‌: ರಸ್ತೆ ಬದಿಯ ಗೂಡಂಗಡಿಯಲ್ಲಿ ಟೀ ಕುಡಿದ ವೀಡಿಯೋ ವೈರಲ್

ಬೆಳಗಾವಿಯಲ್ಲಿ ಸಚಿನ್‌ ತೆಂಡೂಲ್ಕರ್‌: ರಸ್ತೆ ಬದಿಯ ಗೂಡಂಗಡಿಯಲ್ಲಿ ಟೀ ಕುಡಿದ ವೀಡಿಯೋ ವೈರಲ್

- Advertisement -
- Advertisement -

ಕುಂದಾನಗರಿ ಬೆಳಗಾವಿಯಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ರಸ್ತೆ ಬದಿಯ ಗೂಡಂಗಡಿಯೊಂದರಲ್ಲಿ ಚಹಾ ಸೇವಿಸಿದ ವೀಡಿಯೋ ಒಂದು ವೈರಲ್ ಆಗ ತೊಡಗಿದೆ.

ಮುಂಬೈ, ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಟೀ ಕುಡಿದು ಬಳಿಕ ತೆರಳಿದ್ದಾರೆ. ತಾಲೂಕಿನ ಹೊರವಲಯದಲ್ಲಿರುವ ಮಚ್ಛೆ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಪಕ್ಕದಲ್ಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್‍ನಲ್ಲಿ ಸಚಿನ್ ತೆಂಡೂಲ್ಕರ್ ಚಹಾ ಸೇವಿಸಿದ್ದಾರೆ. ಈ ವೇಳೆ ಅಲ್ಲಿದ್ದ ಸಾರ್ವಜನಿಕರು ಸಚಿನ್ ಕಂಡು ಸೆಲ್ಫಿ, ವೀಡಿಯೋ ಮತ್ತು ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

- Advertisement -

Latest News

error: Content is protected !!