Friday, June 26, 2026
Homeಕರಾವಳಿಮಂಗಳೂರುನೆಲ್ಯಾಡಿ: ಗೋಳಿತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ; ಅರಸಿನಮಕ್ಕಿ ಹತ್ಯಡ್ಕ...

ನೆಲ್ಯಾಡಿ: ಗೋಳಿತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ; ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರಫಾ ಸದಾನಂದ ಆಚಾರ್ಯ ನಿಧನ

- Advertisement -
- Advertisement -

ನೆಲ್ಯಾಡಿ:ಗೋಳಿತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರಫಾ ಸದಾನಂದ ಆಚಾರ್ಯ(55) ನಿಧನರಾಗಿದ್ದಾರೆ.

ಕೊಕ್ಕಡದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳಿಗೆ ನೆರವಾಗಲು ಧಾವಿಸಿದ್ದು, ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!