Saturday, June 6, 2026
Homeತಾಜಾ ಸುದ್ದಿಡಿ ವಿ ಸದಾನಂದ ಗೌಡ ಅಸ್ವಸ್ಥ, ಅಷ್ಟಕ್ಕೂ ಆಗಿದ್ದೇನು? ಈ ವಿಡಿಯೋ ನೋಡಿ....

ಡಿ ವಿ ಸದಾನಂದ ಗೌಡ ಅಸ್ವಸ್ಥ, ಅಷ್ಟಕ್ಕೂ ಆಗಿದ್ದೇನು? ಈ ವಿಡಿಯೋ ನೋಡಿ….

- Advertisement -
- Advertisement -

ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಆರೋಗ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಬೆಳಗ್ಗೆ ಶಿವಮೊಗ್ಗದಲ್ಲಿ ಬಿಜೆಪಿ ವಿಶೇಷ ಸಭೆಯಲ್ಲಿ ಡಿವಿಎಸ್ ಪಾಲ್ಗೊಂಡಿದ್ದರು. ಬಳಿಕ ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!