Thursday, July 16, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಇಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಇಂದು ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಸುದ್ದಿಗೋಷ್ಠಿ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಸದಾನಂದ ಗೌಡ, ಮಂಗಳವಾರ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆಯನ್ನೂ ನಡೆಸಿದ್ದರು‌.

ಈ ಮಧ್ಯೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಸದಾನಂದ ಗೌಡರನ್ನು ಮನವೊಲಿಸುವ ಪ್ರಯತ್ನ ಮಾಡಿದೆ ಎನ್ನಲಾಗಿದ್ದು, ಇಂದಿನ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

ಇದೇ ವೇಳೆ ಪಕ್ಷದ ವರಿಷ್ಠರ ನಡೆ ಕುರಿತು ಸುದ್ದಿಗೋಷ್ಠಿಯಲ್ಲಿ ಸದಾನಂದ ಗೌಡ ಮಾತನಾಡಲಿದ್ದಾರೆ ಎಂದೂ ಹೇಳಲಾಗುತ್ತಿದ್ದು, ರಾಜಕೀಯದಿಂದ ದೂರ ಉಳಿಯುವ ನಿರ್ಧಾರವನ್ನೂ ಪ್ರಕಟಿಸುತ್ತಾರೆ ಎಂಬ ಚರ್ಚೆಯೂ ನಡೆದಿದೆ‌.

- Advertisement -

Latest News

error: Content is protected !!