Sunday, May 5, 2024
Homeತಾಜಾ ಸುದ್ದಿಆಶ್ರಮಕ್ಕೆ ನುಗ್ಗಿ ಸಾಧ್ವಿ ಮೇಲೆ ಗ್ಯಾಂಗ್‍ರೇಪ್ ಮಾಡಿದ ನಾಲ್ವರು

ಆಶ್ರಮಕ್ಕೆ ನುಗ್ಗಿ ಸಾಧ್ವಿ ಮೇಲೆ ಗ್ಯಾಂಗ್‍ರೇಪ್ ಮಾಡಿದ ನಾಲ್ವರು

spot_img
- Advertisement -
- Advertisement -

ರಾಂಚಿ: ಜಾರ್ಖಂಡ್ ಗೋಡ್ಡಾ ಜಿಲ್ಲೆಯ ಆಶ್ರಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಡರಾತ್ರಿ ಆಶ್ರಮಕ್ಕೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಆಶ್ರಮದಲ್ಲಿದ್ದವರಿಗೆ ಗನ್ ತೋರಿಸಿ ಹೆದರಿಸಿ ಅವರನ್ನು ರೂಮ್ ನಲ್ಲಿ ಕೂಡಿ ಹಾಕಿ ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಜಿಲ್ಲೆಯ ಆಶ್ರಮಕ್ಕೆ ಸೋಮವಾರ ತಡರಾತ್ರಿ ನಾಲ್ವರು ಆರೋಪಿಗಳು ಏಕಾಏಕಿ ಬಲವಂತವಾಗಿ ನುಗ್ಗಿದ್ದಾರೆ. ನಂತರ ಆಶ್ರಮದಲ್ಲಿದ್ದ ಸಾಧುಗಳನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದಾರೆ. ಈ ವೇಳೆ ಆಶ್ರಮದಲ್ಲಿದ್ದ 38 ವರ್ಷದ ಸಾಧ್ವಿ ಮೇಲೆ ನಾಲ್ವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಸಾಧ್ವಿ ಮೇಲಿನ ಅತ್ಯಾಚಾರವನ್ನು ಸಾಧುವೊಬ್ಬರು ತಡೆಯಲು ಬಂದಾಗ ಅವರನ್ನು ಆರೋಪಿಗಳು ಥಳಿಸಿದ್ದಾರೆ. ಸಂತ್ರಸ್ತೆ ಮಂಗಳವಾರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಹೋಗಿ ತನಿಖೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!