- Advertisement -
![]()
- Advertisement -
ಬೆಂಗಳೂರು: ಸಾರಿಗೆ ಇಲಾಖೆಯು ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವ ಸಂದರ್ಭ ಸೀಟ್ ಬೆಲ್ಟ್ ಹಾಕಲೇಬೇಕು ಎನ್ನುವ ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆ 2019ರ ಅನ್ವಯ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳು ಸೇಫ್ಟಿ ಧಾರಣೆ ಮಾಡುವುದು ಕಡ್ಡಾಯವಾಗಿದ್ದು, 4 ವರ್ಷ ಒಳಗಿನ ಮಕ್ಕಳನ್ನು ಬೈಕ್‌ಗಳಲ್ಲಿ ಕರೆದುಕೊಂಡು ಹೋಗುವಾಗ ಶಿಶು ಕವಚ ಹಾಕದಿದ್ದರೆ ಕೇಸ್ ಹಾಗೂ ದಂಡವನ್ನು ಸಾರಿಗೆ ಇಲಾಖೆ ಹಾಕುತ್ತಿದೆ. ಮಕ್ಕಳಿಗೆ ಸೇಫ್ಟಿ ಬೆಲ್ಟ್ ಹಾಕದ ಪೋಷಕರಿಗೆ 1,000 ರೂ. ದಂಡ ಹಾಕುತ್ತಿದೆ ಎನ್ನಲಾಗಿದೆ.
ಈ ಹಿಂದೆ ಇಂತಹ ಕಾಯ್ದೆ ಜಾರಿಯಲ್ಲಿದ್ದು, ಸಮರ್ಪಕವಾಗಿ ಜಾರಿಯಾಗದ ಹಿನ್ನೆಲೆ, ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾದಾಗ ಕೇಂದ್ರ ಸರ್ಕಾರ ಅಧಿಸೂಚನೆಯಂತೆ ರಾಜ್ಯದಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾರಿಗೆ ಇಲಾಖೆಗೆ ಸೂಚಿಸಿದೆ.
- Advertisement -


