Wednesday, June 24, 2026
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಪ್ರಕರಣ; ಆರೋಪಿ ಸಫ್ರಿದ್ ಬೆಳ್ಳಾರೆ ಬಂಧನ

ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಪ್ರಕರಣ; ಆರೋಪಿ ಸಫ್ರಿದ್ ಬೆಳ್ಳಾರೆ ಬಂಧನ

- Advertisement -
- Advertisement -

ಸುಳ್ಯ; ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರಿದ್ ಬೆಳ್ಳಾರೆಯನ್ನು ಇಂದು ಬೆಳಗ್ಗಿನ ಜಾವ 4 ಗಂಟೆ ವೇಳೆಗೆ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ನಿನ್ನೆ ಸಂಜೆ ಕರೆ ಮಾಡಿದ ಸಫ್ರಿದ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ , ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿತ್ತು. ಈ ಬಗೆಗಿನ ಆಡಿಯೋ ಕೂಡ ವೈರಲ್ ಆಗಿತ್ತು. ಈ ಬಗ್ಗೆ ಪ್ರಶಾಂತ್ ರೈ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.ಇನ್ನು ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದರು. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸುತ್ತಿದ್ದರು.ಅಲ್ಲದೇ ಬಂಧಿಸದೇ ಇದ್ದರೆ ಬೆಳ್ಳಾರೆ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಇನ್ನು ಆರೋಪಿಯನ್ನು ಬಂಧಿಸುವಂತೆ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಪೊಲೀಸ್ ವರಿಷ್ಟಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರಿಗೆ ಮನವಿ ಮಾಡಿದ್ದರು. ಇದೀಗ ಇಂದು ಬೆಳ್ಳಂಬೆಳಗ್ಗೆ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!