Monday, June 10, 2024
Homeಕರಾವಳಿಉಡುಪಿ'ಸಾಗರ ಕವಚ' ಹೆಸರಿನಲ್ಲೊಂದು ಅಣಕು ಕಾರ್ಯಾಚರಣೆ

‘ಸಾಗರ ಕವಚ’ ಹೆಸರಿನಲ್ಲೊಂದು ಅಣಕು ಕಾರ್ಯಾಚರಣೆ

spot_img
- Advertisement -
- Advertisement -

ಕಾರವಾರ: ಭಯೋತ್ಪಾದಕರ ದಾಳಿ,ಸಮಾಜಘಾತುಕ ವ್ಯಕ್ತಿಗಳು, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಿಶೀಲಿಸಲು ನಗರದ ವಿವಿಧೆಡೆ ಬುಧವಾರ ‘ಸಾಗರ ಕವಚ’ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಯಿತು. ಪೊಲೀಸ್ ಇಲಾಖೆ, ಕರಾವಳಿ ಕಾವಲು ಪೊಲೀಸ್, ಭಾರತೀಯ ತಟ ರಕ್ಷಣಾ ದಳ ಹಾಗೂ ನೌಕಾಪಡೆ ಸಂಯುಕ್ತವಾಗಿ ಈ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಅನುಮಾನಾಸ್ಪದವಾಗಿ ಕಂಡುಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು.

ಈ ಅವಧಿಯಲ್ಲಿ ಇಲಾಖೆಗಳ ಸಿದ್ಧತೆಯ ಬಗ್ಗೆ ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳಲಾಯಿತು.
ಈ ಅವಧಿಯಲ್ಲಿ ಪೊಲೀಸರು ಕಾಳಿ ನದಿ ಸೇತುವೆಯ ಬಳಿ, ಬೈತಖೋಲ್ ಬಂದರಿಗೆ ಹೋಗುವ ದಾರಿಯಲ್ಲಿ, ರೈಲು ನಿಲ್ದಾಣ, ಕಡಲತೀರಗಳು, ನಗರದ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳನ್ನು ಪರಿಶೀಲನೆ ಮಾಡಿದರು.

- Advertisement -
spot_img

Latest News

error: Content is protected !!