Thursday, April 25, 2024
Homeಕರಾವಳಿಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಮಂಗಳೂರು ಪೊಲೀಸರು

ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ಮಂಗಳೂರು ಪೊಲೀಸರು

spot_img
- Advertisement -
- Advertisement -

ಮಂಗಳೂರು; ದೇಶದ ಹಲವು ರಾಜ್ಯಗಳಲ್ಲಿ ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿದ್ದ  ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ್ನು ಹೆಡೆಮುರಿ ಕಟ್ಟುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದರಲ್ಲಿ ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಸಾಹೇಬ್ ಗಂಜ್ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.

ಬಂಧಿತರಿಂದ ಗ್ಯಾಸ್ ಕಟ್ಟರ್, ಅಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ತಲವಾರು ಸೇರಿ ದರೋಡೆಗೆ ಬಳಸುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಭಾಸ್ಕರ ಬೆಳ್ಚಪಾಡ(65),ದಿನೇಶ್ ರಾವಲ್ ಅಲಿಯಾಸ್ ಸಾಗರ್ (38),ಮೊಹಮ್ಮದ್ ಜಾಮೀಲ್ ಶೇಖ್(29), ಇಂಜಮಾಮ್ ಉಲ್ ಹಕ್(27),ರೂಪ್ ಸಿಂಗ್ (34) ಕೃಷ್ಣ ಬಹದ್ದೂರ್ ಬೋಗಟಿ(41),ಇಮ್ದದುಲ್ ರಝಾಕ್ ಶೇಖ್(32)ಬಿವುಲ್ ಶೇಖ್(31)ಇಮ್ರಾನ್ ಶೇಖ್(30), ಬಂಧಿತರು. ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿನ ತಂಡ ದಾಳಿ ನಡೆಸಿ ಇವರನ್ನು ಬಂಧಿಸಿದ್ದಾರೆ.

ದುಷ್ಕರ್ಮಿಗಳು ಮಂಗಳೂರು ತೊಕ್ಕೊಟ್ಟಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದು ನಂತರ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡು ದರೋಡೆಗೆ ಸಂಚು ರೂಪಿಸಿದ್ದರು.ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿ ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನದ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಅವರಿಂದ ಸ್ಕೂಟರ್ ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಗ್ಯಾಂಗ್ ಕರಾವಳಿಗೆ ಎಂಟ್ರಿ‌ಕೊಟ್ಟಿರುವುದು ಗೊತ್ತಾಗಿತ್ತು.

- Advertisement -
spot_img

Latest News

error: Content is protected !!