Sunday, June 7, 2026
Homeಕರಾವಳಿಸಂತ ಜೆರೋಸಾ ಶಾಲೆ ವಿವಾದ ಪ್ರಕರಣ; ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

ಸಂತ ಜೆರೋಸಾ ಶಾಲೆ ವಿವಾದ ಪ್ರಕರಣ; ಐಎಎಸ್ ಅಧಿಕಾರಿಯಿಂದ ತನಿಖೆ ಆರಂಭ

- Advertisement -
- Advertisement -

ಮಂಗಳೂರು: ಇಲ್ಲಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ.ಆಕಾಶ್‌ ಶಂಕರ್‌ ಸೋಮವಾರದಂದು ನಗರಕ್ಕೆ ಆಗಮಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಡಿಡಿಪಿಐ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆಕಾಶ್ ಶಂಕರ್, “ಸತ್ಯಾನ್ವೇಷಣೆಗೆ ಆಗಮಿಸಿದ್ದೇನೆ. ಯಾವ ರೀತಿ ತನಿಖೆ ಮಾಡಬೇಕೆಂದು ನಾನೊಂದು ಯೋಜನೆ ರೂಪಿಸಿದ್ದೇನೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದೇನೆ. ಹಂತ ಹಂತವಾಗಿ ಬಹಳ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

- Advertisement -

Latest News

error: Content is protected !!