Thursday, July 16, 2026
Homeಅಪರಾಧನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ; ಮೂವರು ಆರೋಪಿಗಳ ಬಂಧನ; ಎಂಡಿಎಂಎ ಸಹಿತ 7 ಲಕ್ಷ ಮೌಲ್ಯದ ಸೊತ್ತು...

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ; ಮೂವರು ಆರೋಪಿಗಳ ಬಂಧನ; ಎಂಡಿಎಂಎ ಸಹಿತ 7 ಲಕ್ಷ ಮೌಲ್ಯದ ಸೊತ್ತು ವಶಕ್ಕೆ 

- Advertisement -
- Advertisement -

ಕೊಣಾಜೆ: ಇಲ್ಲಿನಪಜೀರು ಗ್ರಾಮದ ಕಂಬಳಪದವು ಸಮೀಪ ಮೂವರು ಯುವಕರು ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

ಬಂಧಿತ ಆರೋಪಿಗಳನ್ನು ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಎಂದು ಗುರುತಿಸಲಾಗಿದೆ.   

ಆರೋಪಿಗಳಿಂದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ, ಮಾರಾಟ ಮಾಡಲು ಬಳಸಿದ ಕಾರು, 3 ಮೊಬೈಲ್ ಫೋನ್ ಗಳು, ಗಾಜಿನ ನಳಿಕೆ, ಹಾಗೂ ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಳ್ಳಲಾದ ಒಟ್ಟು ಸೊತ್ತಿನ ಮೌಲ್ಯ 7,76,980 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!