- Advertisement -
- Advertisement -
ಬೆಳ್ತಂಗಡಿ : ಪದ್ಮ ಶ್ರೀ ಪುರಸ್ಕೃತೆ, ಪರಿಸರವಾದಿ ಸಾಲುಮರದ ತಿಮ್ಮಕ್ಕ ಇಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಇಂದು ಸಂಜೆ ವೇಳೆಗೆ ಮಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಪಡೆದು ನಂತರ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಲ್ಲಿಂದ ಅನ್ನಪೂರ್ಣ ಛತ್ರದಲ್ಲಿ ಊಟ ಮಾಡಿ ತಮ್ಮೂರಿಗೆ ಪ್ರಯಾಣ ಬೆಳೆಸಿದರು.

ಈ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮಲೆಕ್ಕಿಗ ಪ್ರದೀಪ್ ಮತ್ತಿತರ ಅಧಿಕಾರಿಗಳು ಜೊತೆಯಲ್ಲಿದ್ದರು.
- Advertisement -